Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:2 - ಕನ್ನಡ ಸತ್ಯವೇದವು C.L. Bible (BSI)

2 ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ವೇದಿಯನ್ನು ಕುರಿತು - ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬೊಬ್ಬನು ಹುಟ್ಟುವನು; ಅವನು ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:2
19 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.


ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು,


ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.


ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು