1 ಅರಸುಗಳು 13:24 - ಕನ್ನಡ ಸತ್ಯವೇದವು C.L. Bible (BSI)24 ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು. ಅಧ್ಯಾಯವನ್ನು ನೋಡಿ |