Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:25 - ಕನ್ನಡ ಸತ್ಯವೇದವು C.L. Bible (BSI)

25 ಹಾದುಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವದನ್ನೂ ಸಿಂಹವು ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡು ಮುದುಕನಾದ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಆ ದೇಹವನ್ನೂ ಮತ್ತು ಆ ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಆ ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:25
2 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.


ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು