Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:34 - ಕನ್ನಡ ಸತ್ಯವೇದವು C.L. Bible (BSI)

34 ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾಪವೇ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:34
17 ತಿಳಿವುಗಳ ಹೋಲಿಕೆ  

ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.


ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.


ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;


ಆ ಸಮಯದಲ್ಲಿ ಯಾರೊಬ್ಬಾಮನ ಮಗ ಅಬೀಯನು ಅಸ್ವಸ್ಥನಾದನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.


ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು