Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:8 - ಕನ್ನಡ ಸತ್ಯವೇದವು C.L. Bible (BSI)

8 ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಮನುಷ್ಯನು ಅರಸನಿಗೆ - ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ ನಾನು ನಿನ್ನ ಸಂಗಡ ಬರುವದಿಲ್ಲ; ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:8
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.


ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಯೇಲರು ಈ ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂದು ನಿನ್ನ ಅಣ್ಣ ಆರೋನನೇ ಫರೋಹನ ಮುಂದೆ ಮಾತಾಡಬೇಕು.


ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ,


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.


ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.


ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು