Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:9 - ಕನ್ನಡ ಸತ್ಯವೇದವು C.L. Bible (BSI)

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಯೆಹೋವನ ಅಪ್ಪಣೆಯಾಗಿದೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:9
19 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.


ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು