Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:11 - ಕನ್ನಡ ಸತ್ಯವೇದವು C.L. Bible (BSI)

11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:11
14 ತಿಳಿವುಗಳ ಹೋಲಿಕೆ  

ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು".


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿಯೇ ಅಹಾಬನ ಮನೆಗೂ ಆಗುವುದು.


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.


ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು