Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ, ಇಸ್ರಯೇಲರ ಮೇಲೆ ಬೇರೊಬ್ಬ ಅರಸನನ್ನು ನೇಮಿಸುವರು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವುದೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಇಸ್ರಾಯೇಲ್ಯರ ಮೇಲೆ ಬೇರೊಬ್ಬ ಅರಸನನ್ನು ನೇವಿುಸುವನು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಇದಲ್ಲದೆ ಯೆಹೋವ ದೇವರು ಇಸ್ರಾಯೇಲನ್ನು ಆಳುವುದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:14
8 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು