Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:17 - ಕನ್ನಡ ಸತ್ಯವೇದವು C.L. Bible (BSI)

17 ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೆ ಹುಡುಗನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:17
11 ತಿಳಿವುಗಳ ಹೋಲಿಕೆ  

ಜುದೇಯದ ಅರಸ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಇಸ್ರಯೇಲರ ಅರಸನಾಗಿ ತಿರ್ಚದಲ್ಲಿ ಇದ್ದುಕೊಂಡು ಇಪ್ಪತ್ತನಾಲ್ಕು ವರ್ಷ ಆಳಿದನು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು.


ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.


ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು