Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:19 - ಕನ್ನಡ ಸತ್ಯವೇದವು C.L. Bible (BSI)

19 ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:19
25 ತಿಳಿವುಗಳ ಹೋಲಿಕೆ  

ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.


ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಜಿಮ್ರಿಯ ಉಳಿದ ಚರಿತ್ರೆ ಹಾಗು ಅವನ ಒಳಸಂಚು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಏಲನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಬಾಷನ ಉಳಿದ ಚರಿತ್ರೆ ಹಾಗು ಅವನ ಪರಾಕ್ರಮ ಸಾಧನೆಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಾದಾಬನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.


ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.


ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವಾಹಾಜನ ಉಳಿದ ಚರಿತ್ರೆ ಹಾಗು ಅವನ ಶೂರಕೃತ್ಯಗಳ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನ ಉಳಿದ ಚರಿತ್ರೆ, ಶೂರಕೃತ್ಯಗಳ ಹಾಗು ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡೆಸಿದ ಯುದ್ಧದ ವಿವರವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜೆಕರ್ಯನ ಉಳಿದ ಚರಿತ್ರೆ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಶಲ್ಲೂಮನ ಉಳಿದ ಚರಿತ್ರೆ ಹಾಗು ಅವನ ಒಳಸಂಚಿನ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಮೆನಹೇಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಪೆಕಹ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಪೆಕಹನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳನ್ನು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಓದಬಹುದು.


ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.


ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.


ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು