Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:4 - ಕನ್ನಡ ಸತ್ಯವೇದವು C.L. Bible (BSI)

4 ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:4
12 ತಿಳಿವುಗಳ ಹೋಲಿಕೆ  

ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.


ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು