Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:7 - ಕನ್ನಡ ಸತ್ಯವೇದವು C.L. Bible (BSI)

7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ - ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:7
11 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.


ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.


ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,


ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ಆದರೆ, ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ನಾನು ನಿನ್ನನ್ನು ಇಸ್ರಯೇಲರ ಅರಸನನ್ನಾಗಿ ನೇಮಿಸುವೆನು; ನೀನು ಅವರನ್ನು ಇಷ್ಟದ ಪ್ರಕಾರ ಆಳಬಹುದು.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು