Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:9 - ಕನ್ನಡ ಸತ್ಯವೇದವು C.L. Bible (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:9
42 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


“ನಿಮಗಾಗಿ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.


ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.


ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.


ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು