1 ಅರಸುಗಳು 15:17 - ಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |