1 ಅರಸುಗಳು 15:18 - ಕನ್ನಡ ಸತ್ಯವೇದವು C.L. Bible (BSI)18 ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |