1 ಅರಸುಗಳು 15:19 - ಕನ್ನಡ ಸತ್ಯವೇದವು C.L. Bible (BSI)19 ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು. ಅಧ್ಯಾಯವನ್ನು ನೋಡಿ |