Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:29 - ಕನ್ನಡ ಸತ್ಯವೇದವು C.L. Bible (BSI)

29 ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:29
12 ತಿಳಿವುಗಳ ಹೋಲಿಕೆ  

“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.


ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು