Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:3 - ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:3
12 ತಿಳಿವುಗಳ ಹೋಲಿಕೆ  

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು