Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:4 - ಕನ್ನಡ ಸತ್ಯವೇದವು C.L. Bible (BSI)

4 ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:4
26 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು