Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:5 - ಕನ್ನಡ ಸತ್ಯವೇದವು C.L. Bible (BSI)

5 ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:5
17 ತಿಳಿವುಗಳ ಹೋಲಿಕೆ  

ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಅವನು ಎಡಕ್ಕಾಗಲಿ ಬಲಕ್ಕಾಗಲಿ ಹೋಗದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲೇ ನೇರವಾಗಿ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು