1 ಅರಸುಗಳು 16:16 - ಕನ್ನಡ ಸತ್ಯವೇದವು C.L. Bible (BSI)16 ಜಿಮ್ರಿ, ಅರಸನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ಸುದ್ದಿ ಪಾಳೆಯದಲ್ಲಿದ್ದ ಇಸ್ರಯೇಲರಿಗೆ ಮುಟ್ಟಿತು. ಅವರು ಅದೇ ದಿವಸ, ಅಲ್ಲಿಯೇ, ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜಿಮ್ರಿಯು ಅರಸನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲ್ಯರಿಗೆ ಮುಟ್ಟಲಾಗಿ ಅವರು ಅದೇ ದಿವಸ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನ ವಿರುದ್ಧ ಜಿಮ್ರಿಯು ರಹಸ್ಯಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು. ಅಧ್ಯಾಯವನ್ನು ನೋಡಿ |