Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:2 - ಕನ್ನಡ ಸತ್ಯವೇದವು C.L. Bible (BSI)

2 “ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:2
16 ತಿಳಿವುಗಳ ಹೋಲಿಕೆ  

ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು