Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:21 - ಕನ್ನಡ ಸತ್ಯವೇದವು C.L. Bible (BSI)

21 ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:21
12 ತಿಳಿವುಗಳ ಹೋಲಿಕೆ  

ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಯೇಲರ ಅರಸನಾದನು; ಸಮಾರಿಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.


ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.


ಜಿಮ್ರಿಯ ಉಳಿದ ಚರಿತ್ರೆ ಹಾಗು ಅವನ ಒಳಸಂಚು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು