1 ಅರಸುಗಳು 16:26 - ಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. ಅಧ್ಯಾಯವನ್ನು ನೋಡಿ |