Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:33 - ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:33
15 ತಿಳಿವುಗಳ ಹೋಲಿಕೆ  

ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು