1 ಅರಸುಗಳು 16:34 - ಕನ್ನಡ ಸತ್ಯವೇದವು C.L. Bible (BSI)34 ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರೀಮಗನಾದ ಅಬೀರಾಮನನ್ನೂ ಬಾಗಲುಗಳನ್ನಿಡುವಾಗ ಕಿರೀಮಗನಾದ ಸೆಗೂಬನನ್ನೂ ಕಳಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನ ದಿವಸಗಳಲ್ಲಿ ಬೇತೇಲಿನ ಹೀಯೇಲನು ಯೆರಿಕೋವನ್ನು ಕಟ್ಟಿಸಿದನು. ಯೆಹೋವ ದೇವರು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ, ತನ್ನ ಚೊಚ್ಚಲಮಗನಾದ ಅಬೀರಾಮನನ್ನೂ, ಅದರ ಬಾಗಿಲುಗಳನ್ನು ಇಟ್ಟಾಗ ತನ್ನ ಕಿರಿ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಅಧ್ಯಾಯವನ್ನು ನೋಡಿ |