1 ಅರಸುಗಳು 16:7 - ಕನ್ನಡ ಸತ್ಯವೇದವು C.L. Bible (BSI)7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು. ಅಧ್ಯಾಯವನ್ನು ನೋಡಿ |