Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:1 - ಕನ್ನಡ ಸತ್ಯವೇದವು C.L. Bible (BSI)

1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:1
41 ತಿಳಿವುಗಳ ಹೋಲಿಕೆ  

ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು.


ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.


ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.


ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು.


ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.


ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು.


ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.


ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.


ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


“ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ,


ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.


“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು