Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:10 - ಕನ್ನಡ ಸತ್ಯವೇದವು C.L. Bible (BSI)

10 ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಅಲ್ಲಿಂದ ಹೊರಟು ಚಾರೆಪ್ತದ ಊರುಬಾಗಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕೂಗಿ - ದಯವಿಟ್ಟು ಕುಡಿಯುವದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲೀಯನು ಚಾರೆಪ್ತಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಆ ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನನಗೆ ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:10
6 ತಿಳಿವುಗಳ ಹೋಲಿಕೆ  

ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.


ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,


ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು