Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:16
13 ತಿಳಿವುಗಳ ಹೋಲಿಕೆ  

ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.


ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.


ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.


ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.


ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು