Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:12 - ಕನ್ನಡ ಸತ್ಯವೇದವು C.L. Bible (BSI)

12 ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:12
27 ತಿಳಿವುಗಳ ಹೋಲಿಕೆ  

ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಹೀಗಿದ್ದರೂ ತಾವು ನನಗೆ, “ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು,” ಎಂಬುದಾಗಿ ಆಜ್ಞಾಪಿಸಬಹುದೆ?


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.


ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು