1 ಅರಸುಗಳು 18:18 - ಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು. ಅಧ್ಯಾಯವನ್ನು ನೋಡಿ |