Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:22 - ಕನ್ನಡ ಸತ್ಯವೇದವು C.L. Bible (BSI)

22 “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:22
13 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.


ಆತನು ಇಸ್ರಯೇಲರ ವಿರುದ್ಧ, “ಸರ್ವೇಶ್ವರಾ, ಈ ಜನರು ನಿಮ್ಮ ಪ್ರವಾದಿಗಳನ್ನು ಸಂಹರಿಸಿದ್ದಾರೆ. ನಿಮ್ಮ ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಉಳಿದಿರುವವನು ನಾನೊಬ್ಬನೇ. ನನ್ನನ್ನೂ ಕೊಲ್ಲಲು ಯತ್ನಿಸುತ್ತಿದ್ದಾರೆ,” ಎಂದು ದೇವರಿಗೆ ದೂರಿತ್ತನು.


ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು