Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:26 - ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:26
21 ತಿಳಿವುಗಳ ಹೋಲಿಕೆ  

ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.


ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.


ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.


ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡುವಾಗ ದಾಗೋನ್ ವಿಗ್ರಹ ಸರ್ವೇಶ್ವರನ ಮಂಜೂಷದ ಮುಂದೆ ಬೋರಲುಬಿದ್ದಿರುವುದನ್ನು ಕಂಡು ಅದನ್ನು ಪುನಃ ಅದರ ಸ್ಥಳದಲ್ಲಿಟ್ಟರು.


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು