1 ಅರಸುಗಳು 18:33 - ಕನ್ನಡ ಸತ್ಯವೇದವು C.L. Bible (BSI)33 ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ಆ ತುಂಡುಗಳನ್ನು ಸೌದೆಯ ಮೇಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು. ಅಧ್ಯಾಯವನ್ನು ನೋಡಿ |