Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:12 - ಕನ್ನಡ ಸತ್ಯವೇದವು C.L. Bible (BSI)

12 ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂಕಂಪವಾದನಂತರ ಸಿಡಿಲುಂಟಾಯಿತು; ಅದರಲ್ಲಿಯೂ ಯೆಹೋವನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:12
15 ತಿಳಿವುಗಳ ಹೋಲಿಕೆ  

ರೂಪವೊಂದು ನನ್ನ ಕಣ್ಮುಂದೆ ನಿಂತಿತ್ತು ಆದರೂ ಅದೇನೆಂಬುದು ನನಗೆ ತಿಳಿಯದೆಹೋಯಿತು ಸೂಕ್ಷ್ಮವಾಣಿಯೊಂದು ನನಗೆ ಕೇಳಿಬಂತು:


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು