Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:19 - ಕನ್ನಡ ಸತ್ಯವೇದವು C.L. Bible (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:19
14 ತಿಳಿವುಗಳ ಹೋಲಿಕೆ  

ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.


ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು