Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:21 - ಕನ್ನಡ ಸತ್ಯವೇದವು C.L. Bible (BSI)

21 ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:21
11 ತಿಳಿವುಗಳ ಹೋಲಿಕೆ  

ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.


ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.


ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು