Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:3 - ಕನ್ನಡ ಸತ್ಯವೇದವು C.L. Bible (BSI)

3 ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:3
13 ತಿಳಿವುಗಳ ಹೋಲಿಕೆ  

ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು