Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:6 - ಕನ್ನಡ ಸತ್ಯವೇದವು C.L. Bible (BSI)

6 ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:6
13 ತಿಳಿವುಗಳ ಹೋಲಿಕೆ  

ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.


ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.


ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.


ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು