Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:8 - ಕನ್ನಡ ಸತ್ಯವೇದವು C.L. Bible (BSI)

8 ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:8
15 ತಿಳಿವುಗಳ ಹೋಲಿಕೆ  

ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.


ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.


ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.


ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು