Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಅವಸಾನಕಾಲವು ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:1
15 ತಿಳಿವುಗಳ ಹೋಲಿಕೆ  

ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು