1 ಅರಸುಗಳು 2:17 - ಕನ್ನಡ ಸತ್ಯವೇದವು C.L. Bible (BSI)17 ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು - ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು; ಅವನು ನಿನ್ನ ಮಾತನ್ನು ತಳ್ಳುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದ್ದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆಯಾಗುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |