Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:2 - ಕನ್ನಡ ಸತ್ಯವೇದವು C.L. Bible (BSI)

2 “ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:2
21 ತಿಳಿವುಗಳ ಹೋಲಿಕೆ  

ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.


ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.


ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು