Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:20 - ಕನ್ನಡ ಸತ್ಯವೇದವು C.L. Bible (BSI)

20 “ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಂದು ಸಣ್ಣ ಬಿನ್ನಹ ಉಂಟು, ಅದನ್ನು ತಿರಸ್ಕರಿಸಬೇಡ ಎಂದು ಹೇಳಿದಳು. ಅರಸನು - ನನ್ನ ತಾಯಿಯೇ, ಏನು ಬೇಕು, ಕೇಳು; ನಾನು ಆಗದು ಅನ್ನುವದಿಲ್ಲ ಎಂದನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬತ್ಷೆಬೆಳು ಅವನಿಗೆ, “ನಿನ್ನಲ್ಲಿ ಒಂದು ಸಣ್ಣ ಕೋರಿಕೆಯಿದೆ, ಅದನ್ನು ದಯವಿಟ್ಟು ನಿರಾಕರಿಸದಿರು” ಎಂದು ಕೇಳಿದಳು. ರಾಜನು, “ನನ್ನ ತಾಯಿಯೇ, ನಿನ್ನ ಕೋರಿಕೆಯೇನು? ನಾನು ನಿನ್ನ ಕೋರಿಕೆಯನ್ನು ನಿರಾಕರಿಸುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:20
11 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.


ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು