1 ಅರಸುಗಳು 2:26 - ಕನ್ನಡ ಸತ್ಯವೇದವು C.L. Bible (BSI)26 ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |