Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:27 - ಕನ್ನಡ ಸತ್ಯವೇದವು C.L. Bible (BSI)

27 ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈಹೊತ್ತು ನಿನ್ನನ್ನು ಕೊಲ್ಲಿಸುವದಿಲ್ಲ ಎಂದು ಹೇಳಿ ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತಳ್ಳಿಬಿಟ್ಟನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:27
13 ತಿಳಿವುಗಳ ಹೋಲಿಕೆ  

ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು