Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:28 - ಕನ್ನಡ ಸತ್ಯವೇದವು C.L. Bible (BSI)

28 ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:28
8 ತಿಳಿವುಗಳ ಹೋಲಿಕೆ  

ಅದೋನೀಯನು ಸೊಲೊಮೋನನಿಗೆ ಹೆದರಿ, ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.


ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.


ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು