1 ಅರಸುಗಳು 2:3 - ಕನ್ನಡ ಸತ್ಯವೇದವು C.L. Bible (BSI)3 ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ. ಅಧ್ಯಾಯವನ್ನು ನೋಡಿ |