Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:30 - ಕನ್ನಡ ಸತ್ಯವೇದವು C.L. Bible (BSI)

30 ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ - ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ ಎಂದು ಹೇಳಲು ಅವನು - ಬರುವದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ ಎಂದು ಉತ್ತರ ಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಅಂದದ್ದನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!’” ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದ್ದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:30
3 ತಿಳಿವುಗಳ ಹೋಲಿಕೆ  

ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.


ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು